ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ 2ನೇ ಅವಧಿಯ ಎರಡನೇ ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ ಮಯೂರಿ ಎಸ್ಟೇಟ್ ಉದ್ಯಾನವನದಲ್ಲಿ ಸಸಿ ನೆಟ್ಟು, ಕೊಳೆಗೆರೆ ನಿವಾಸಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸುವುದರ ಜೊತೆಗೆ ವಿವಿಧ ಸಂಸ್ಥೆಯವರು ನೀಡಿರುವ ಆಹಾರದ ಕಿಟ್‍ಗಳನ್ನು ಜಿಲ್ಲಾಡಳಿತದೊಂದಿಗೆ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಚಾಲನೆ ನೀಡಿದರು. ಅಧಿಕಾರಿಗಳು, ಸ್ಥಳಿಯರು ಇದ್ದರು.