ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಆನಗೋಡು ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ತೊಗರಿ ಕಿರು ಚೀಲಗಳ ವಿತರಣಾ ಕಾರ್ಯಕ್ರಮವನ್ನು ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಉದ್ಘಾಟಿಸಿ, ರೈತರಿಗೆ ತೊಗರಿಯನ್ನು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಬಯಲು ಸೀಮೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಅಣಬೇರು ಜೀವನ್ ಮೂರ್ತಿ, ಮಂಡಲದ ಅಧ್ಯಕ್ಷರಾದ ಶ್ಯಾಗಲೆ ದೇವೇಂದ್ರಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.