ಗೆಲ್ ಸಂಸ್ಥೆ ಹಾಗೂ ಗ್ರಾಮ ವಿಕಾಸ ಸಂಸ್ಥೆ ಸಹಯೋಗದಲ್ಲಿ 300 ಥರ್ಮಲ್ ಸ್ಕಾನರ್‍ಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಅವರು ಮತ್ತು ಬೃಹತ್, ಮದ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಜಿಲ್ಲಾಡಳಿತಕ್ಕೆ ನೀಡಿದರು. ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಗೇಲ್ ಸಂಸ್ಥೆಯ ಡಿ.ಜಿ.ಎಮ್. ಪಿ.ನಂದಗೋಪಾಲ, ಗ್ರಾಮ ವಿಕಾಸ ಸಂಸ್ಥೆಯ ಜಗದೀಶ ನಾಯ್ಕ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.