ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡಕುಟುಂಬದವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು. ಮೂಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಬಗಾದಿ ಗೌತಮ್, ಜಿ.ಪಂ. ಸಿಇಒ ಎ.ಎಂ. ಯೋಗೀಶ್, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಮತ್ತಿತರರು ಇದ್ದಾರೆ.