25 ಲೀಟರ್ ಮದ್ಯ ಜಪ್ತಿ

ಕಲಬುರಗಿ,ಏ.13-ಕಲಬುರಗಿಯಿಂದ ಶಹಾಬಾದಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 25.920 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.
ಅಬಕಾರಿ ಅಪರ ಆಯುಕ್ತರು, ಅಬಕಾರಿ ಜಂಟಿ ಆಯುಕ್ತರ ನಿರ್ದೇಶನದ ಮೇರೆಗೆ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಅಬಕಾರಿ ಅಧಿಕಾರಿಗಳು ಈ ದಾಳಿ ನಡೆಸಿ ಮದ್ಯ ಜಪ್ತಿ ಮಾಡಿದ್ದು, ಅಬಕಾರಿ ನಿರೀಕ್ಷಕರಾದ ಗೋಪಾಳೆ ಪಂಡಿತ್ ಅವರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.