25 ಸಾವಿರ ಸಸಿ ನೆಡುವ ವನಸಿರಿ ಕಾರ್ಯಕ್ರಮ

ಮೈಸೂರು,ಜು.13:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮತ್ತು ರಾಜೀವ್ ಸ್ನೇಹ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ 25 ಸಾವಿರ ಸಸಿ ನೆಡುವ ವನಸಿರಿ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಯವರು ದಿವ್ಯ ಸಾನಿಧ್ಯವಹಿಸಿದ್ದರು. ರಾಜಸಭೆಗೆ ನಾಮನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ವಿ. ರಾಜೀವ, ಪಬ್ಲಿಕ್ ಟಿ.ವಿ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ , ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಮೈಸೂರು ಮತ್ತು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಸುನಂದ ಪಾಲನೇತ್ರ, ಶಾಸಕರುಗಳಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ವಿಧಾನ ಪರಿಷತ್ತಿನ ಸದಸ್ಯ ಸಿ.ಎನ್.ಮಂಜೇಗೌಡ, ಬಿಜೆಪಿ ಮೈಸೂರು ಗ್ರಾಮಾಂತರ ಅಧ್ಯಕ್ಷರಾದ ಮಂಗಳಾ ಸೋಮಶೇಖರ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ, ಪರಿಸರ ತಜ್ಞ ಶಿವಾನಂದ ಕಳವೆ, ವಿನಯ್ ರಾಮಕೃಷ್ಣ, ಮೂಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಇತರೆ ಗಣ್ಯರು ಭಾಗವಹಿಸಿದ್ದರು.