26 ನೇ ರಾಷ್ಟ್ರೀಯ ಯುವಜನೋತ್ಸವ-2023:ಸಿರಿಧಾನ್ಯ ಮತ್ತು ಸಾವಯವ ಮೇಳ

ಧಾರವಾಡ,ಜ13: 26 ನೇ ರಾಷ್ಟ್ರೀಯ ಯುವಜನೋತ್ಸವದ ಅಂಗವಾಗಿ ಧಾರವಾಡ ಕೃಷಿ ಇಲಾಖೆಯಿಂದ ಸಿರಿಧಾನ್ಯ ಮತ್ತು ಸಾವಯವ ಮೇಳವನ್ನು ಆಯೋಜಿಸಲಾಗಿತ್ತು.
ಧಾರವಾಡದ ಕಲಾಭವನದಿಂದ ಸಿರಿಧಾನ್ಯ ಮ್ಯಾರಾಥಾನ್ ಅನ್ನು ಏರ್ಪಡಿಸಿ ಕೋರ್ಟ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿ ಕಛೇರಿ ಆವರಣ ಆಲೂರುವೆಂಕಟರಾವ ಭವನ ಕರ್ನಾಟಕ ಕಾಲೇಜು ಅಂತಿಮವಾಗಿ ಆರ್.ಎನ್.ಶೆಟ್ಟಿ ಕ್ರಿಡಾಂಗಣದಲ್ಲಿ ಕೊನೆಗೊಳಿಸಲಾಯಿತು. ಕೃಷಿ ಇಲಾಖೆ ಏರ್ಪಡಿಸಿದ್ದ ಸಿರಿಧಾನ್ಯ ಜಾಗೃತಿ ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯ, ಗ್ರೀನ್ ಫೌಂಡೇಶನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇನ್ನಿತರ ಸ್ವಯಂ ಸೇವಾ ಸಂಸ್ಥೆಗಳು ಭಾಗವಹಿಸಿದ್ದವು.
ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳು ಕೈಯಲ್ಲಿ ಪ್ರಚಾರ ಫಲಕಗಳನ್ನು ಹಿಡಿದು ಸಿರಿಧಾನ್ಯ ಬಳಕೆ ಮತ್ತು ಆರೋಗ್ಯ ರಕ್ಷಣೆ ಕುರಿತಂತೆ ಘೋಷಣೆಗಳನ್ನು ಕೂಗುತ್ತ ನಡೆದರು. ತಹಶಿಲ್ದಾರ ಸಂತೋಷ ಹಿರೇಮಠ, ವಾರ್ತಾ ಅಧಿಕಾರಿ ಎಸ್.ಎಮ್ ಹಿರೇಮಠ, ಜಂಟಿ ಕೃಷಿ ನಿರ್ದೇಶಕರಾದ ರಾಜಶೇಖರ ಬಿಜಾಪೂರ, ಉಪ ಕೃಷಿ ನಿರ್ದೇಶಕರಾದ ಶ್ರೀಮತಿ ಜಯಶ್ರಿ ಹಿರೇಮಠ ಹಾಗೂ ಜಯಪ್ರಕಾಶ ಮತ್ತು ಇನ್ನಿತರ ಅಧಿಕಾರಿಗಳು ತಂಡದೊಂದಿಗೆ ಹೆಜ್ಜೆಹಾಕಿದರು.
ಇದೇ ಕಾರ್ಯಕ್ರಮದ ನಿಮಿತ್ತ ಧಾರವಾಡದ ಆರ್.ಎನ್. ಶೆಟ್ಟಿ ಸ್ಟೆಡಿಯಂ ಎದುರಿಗಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆವರಣದಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಹಾಕಲಾಗಿದೆ. ಈ ಮಳಿಗೆಗಳಲ್ಲಿ ಕೃಷಿ ವಿಶ್ವ ವಿದ್ಯಾಲಯದ ವಿಜ್ಞಾನಿಗಳು, ವಿವಿಧ ಕೃಷಿ ವಿಜ್ಞಾನ ಕೇಂದ್ರಗಳ ವಿಜ್ಞಾನಿಗಳು ಮಾದರಿ ಹಾಗೂ ಪ್ರಚಾರ ಸಾಮಗ್ರಿಗಳನ್ನು ಪ್ರದರ್ಶಿಸುತ್ತಿದ್ದಾರೆ.
ಕೃಷಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಪ್ರಚಾರ ಹಾಗೂ ಸ್ಥಳದಲ್ಲಿಯೆ ಫಲಾನುಭವಿಗಳ ಆನ್ ಲೈನ್ ಸೇವೆ ನೀಡಲು ಮಳಿಗೆ ತೆರೆಯಲಾಗಿದೆ ಹಾಗೂ ರೈತ ಉತ್ಪಾದಕ ಕಂಪನಿಗಳು ಸ್ವ ಸಹಾಯ ಸಂಘಗಳು, ಸ್ತ್ರೀ ಶಕ್ತಿ ಗುಂಪುಗಳು, ಸಾವಯವ ಒಕ್ಕೂಟ, ಖಾಸಗಿ ಕಂಪನಿಗಳು, ಆತ್ಮ ನಿರ್ಭರ ಭಾರತ ಫಲಾನುಭವಿಗಳು, ಉದ್ದಿಮೆದಾರರು ವಿವಿಧ ಮಾರಾಟ ಸಾಮಗ್ರಿಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡುತ್ತಿದ್ದಾರೆ. ರೊಟ್ಟಿ, ಚಟ್ನಿ, ಉಪ್ಪಿನಕಾಯಿ, ಸಿಹಿ ತಿನಿಸುಗಳು, ಮಾದಲಿ, ಸಿರಿದಾನ್ಯ ಉತ್ಪನ್ನಗಳು, ಶುದ್ಧ ಗಾಣದ ಎಣ್ಣೆ, ಸಾವಯವ ಸಂಸ್ಕರಿತ ಆಹಾರ ಉತ್ಪನ್ನಗಳು, ಸಾವಯವ ಸಂಸ್ಕರಿತ ಆಹಾರ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿವೆ.
ಸಿರಿಧಾನ್ಯಗಳು ಕೃಷಿ ಪರಿಸರದಿಂದ ಕಣ್ಮರೆಯಾಗುತ್ತಿದ್ದು ಮಾನವನ ಆಹಾರದಲ್ಲಿ ಪೆÇೀಷಕಾಂಶಗಳ ಕೊರತೆ ಉಂಟಾಗಿದೆ, ಇದರಿಂದ ಬೇರೆ ಬೇರೆ ಅನಾರೋಗ್ಯದ ಸಮಸ್ಯೆಗಳು ತಲೆದೊರುತ್ತಿದ್ದು ಸಿರಿಧಾನ್ಯಗಳ ಕೃಷಿ ಮತ್ತು ಬಳಕೆಯನ್ನು ಉತ್ತೇಜಿಸಬೇಕಾಗಿದೆ. ಸಂಪ್ರದಾಯಿಕ ಆಹಾರ ಧಾನ್ಯಗಳಾದ ಜೋಳ, ರಾಗಿ, ಸಜ್ಜೆ, ನವಣೆ, ಅರಕ, ಉದಲು, ಕೊರಲು, ಸಾವೆ, ಬರಗು ಇವೆಲ್ಲ ಉತ್ತಮ ಪೆÇೀಷಕಾಂಶಗಳ ಮೂಲಗಳಾಗಿದ್ದು ಯಥೇಚ್ಚ ನಾರಿನ ಅಂಶವನ್ನು ಒಳಗೊಂಡಿವೆ ಇವುಗಳ ಸೇವನೆಯಿಂದ ಮನುಷ್ಯನ ಆರೋಗ್ಯದಲ್ಲಿ ಶೀಘ್ರ ಸುಧಾರಣೆ ಆಗುವುದನ್ನು ತಜ್ಞರು ಗುರುತಿಸಿದ್ದಾರೆ. ಈ ಎಲ್ಲ ಸಂಗತಿಗಳ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು 16 ನೇ ತಾರೀಖಿನವರೆಗೆ ಬೆಳೆಗ್ಗೆ 10 ರಿಂದ ಸಂಜೆ 7 ರ ವರೆಗೆ ಇಂತಹ ವಿಧಾಯಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.