26 ಸಾವಿರ ಕೋಟಿ ಹೂಡಿಕೆ ರಾಜ್ಯ ಸರ್ಕಾರ ಅನುಮತಿ

ಬೆಂಗಳೂರು,ಡಿ.26- ರಾಜ್ಯದಲ್ಲಿ 26,000 ಕೋಟಿ ರೂಪಾಯಿ ಹೂಡಿಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಲಾಗಿದೆ.

ಸರ್ಕಾರದ ಈ ಹೂಡಿಕೆ ಯಿಂದ 13,341 ಮಂದಿಗೆ ಉದ್ಯೋಗ ಸಿಗಲಿದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ಈ ಅನುಮೋದನೆ ನೀಡಿದೆ.

ಹ್ಯುನೆಟ್‌ ಕಂಪನಿ ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್‌ ವಾಹನ ಹಾಗೂ ಬ್ಯಾಟರಿ ಉತ್ಪಾದನಾ ಘಟಕಕ್ಕೆ 1825 ಕೋಟಿ ರೂ ಹೂಡಿಕೆ ಮಾಡಲಿದ್ದು, 2210 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಟ್ವೀಟ್ ಮಾಡಿರುವ ಅವರು,ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ