2600 ಕಿ.ಮೀ ಬೇಲಿ‌ ನಿರ್ಮಾಣ ಪ್ರಗತಿಯಲ್ಲಿ: ಪಾಕ್

ಇಸ್ಲಾಮಾಬಾದ್,ಸೆ.21- ಅಘಫಾನಿಸ್ತಾನ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಸರಿ ಸುಮಾರು 2600 ಕಿಲೋಮೀಟರ್ ಬೇಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಪಾಕಿಸ್ತಾನ ಹೇಳಿದೆ.

ಎರಡು ದೇಶಗಳ ಗಡಿ ಭಾಗದಲ್ಲಿ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಪಾಕಿಸ್ತಾನದ ಸೇನಾಪಡೆಯ ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕಾರ್ ತಿಳಿಸಿದ್ದಾರೆ.

ಪಾಕಿಸ್ತಾನದ ಭದ್ರತೆಯ ವಿಷಯದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿ ಭಾಗದಲ್ಲಿ ಬೇಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿರುವ ಅವರು. ದೇಶದ ಭದ್ರತೆ ಮಾಡಿಕೊಳ್ಳುವುದು ಸರ್ಕಾರದ ಕರ್ತವ್ಯ ಈ‌ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಅಫಘಾನಿಸ್ತಾನವನ್ನು ತಾಲಿಬಾನ್ ಸಂಘಟನೆ ವಶಕ್ಕೆ ಪಡೆದು ಸರ್ಕಾರ ರಚನೆ ಮಾಡುವುದಕ್ಕೂ ಮುನ್ನ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿ ಭಾಗದಲ್ಲಿ ಬೇಲಿ ನಿರ್ಮಾಣ ಕಾರ್ಯವನ್ನು ಪಾಕಿಸ್ತಾನ ಕೈಗೆತ್ತಿಕೊಂಡಿದೆ. ಅದರ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಲಿಬಾನ್ ಸಂಘಟನೆಯ ಸರ್ಕಾರದೊಂದಿಗೆ ಪಾಕಿಸ್ತಾನ ಉತ್ತಮ ಬಾಂಧವ್ಯ ಹೊಂದಿದ್ದರೂ ಪಾಕಿಸ್ತಾನದ ರಕ್ಷಣೆ ನಮ್ಮ ಉದ್ದೇಶ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ತಾಲಿಬಾನ್ ಸರ್ಕಾರ ಹಲವು ಬಾರಿ ಸ್ಪಷ್ಟಪಡಿಸಿರುವಂತೆ ಪಾಕಿಸ್ತಾನದ ಮೇಲೆ ಯಾವುದೇ ಯುದ್ಧ ಸಾರುವುದಾಗಲಿ ಅಥವಾ ಇನ್ನಿತರ ಹೋರಾಟ ಮಾಡುವುದಿಲ್ಲ ಎಂದು ಹೇಳಿದೆ
ಅದರ ಮೇಲೆ ನಂಬಿಕೆ ಇದ್ದರೂ ಗಡಿಭಾಗದಲ್ಲಿ ದೇಶದ ಭದ್ರತೆಯ ಕೆಲಸ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನದ ರಕ್ಷಣೆ ಮತ್ತು ಭದ್ರತೆ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಅದು ಮುಂದುವರೆಯಲಿದೆ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ