27.06 ಕೋಟಿ ರೂ ವೆಚ್ಚದ ಅಭಿವೃದ್ಧಿ ಸೌಲಭ್ಯಗಳ ಲೋಕಾರ್ಪಣೆ

ಹನೂರು.ಏ.24: ಪಟ್ಟಣ ಸೇರಿದಂತೆ ಕ್ಷೇತ್ರದ ವಿವಿಧ ಕಡೆಗಳಲ್ಲಿ 27.6 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶಕುಮಾರ್ ಅವರು ಇಂದು ಲೋಕಾರ್ಪಣೆಗೊಳಿಸಿದರು.
ಪಟ್ಟಣಕ್ಕೆ ಆಗಮಿಸಿದ ಸಚಿವರು ಪಟ್ಟಣದಲ್ಲಿ ನಿರ್ಮಿಸಿರುವ 2 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಐಟಿಐ ಕಾಲೇಜನ್ನು ಉದ್ಘಾಟನೆ ಮಾಡಿದ ಸಚಿವರು ಬಳಿಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಆರ್‍ಐಡಿಎಫ್-23ರ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು. ನಂತರ ಪಟ್ಟಣದಲ್ಲಿ ನೂತನವಾಗಿ 3.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬಿಸಿಎಂ ವಿದ್ಯಾರ್ಥಿನಿಲಯವನ್ನು ಉದ್ಘಾಟನೆ ಮಾಡಿದರು. ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ 1.94 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜು ಕಟ್ಟಡವನ್ನು ಉದ್ಘಾಟನೆ ಮಾಡಿದರು. ಕೆಲಕಾಲ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಲಾಜರ್‍ದೊಡ್ಡಿಯಲ್ಲಿ 1.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆಕ್‍ಡ್ಯಾಂ, ಬ್ಯಾರೇಜ್, ಅಜ್ಜೀಪುರದಲ್ಲಿ 4.89 ಕೋಟಿ ರೂ. ವೆಚ್ಚದಲ್ಲಿ ಪವರ್ ಸ್ಟೇಷನ್, ರಾಮಾಪುರದಲ್ಲಿ 44 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರ ಕಟ್ಟಡ ಹಾಗೂ 2.10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡವನ್ನು ಉದ್ಘಾಟನೆ ಮಾಡಿದರು. ಬಳಿಕ ತಾಲೂಕಿನ ನಾಲ್‍ರೋಡ್‍ನಲ್ಲಿ 4.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆ, ನಕ್ಕುಂದಿಯಲ್ಲಿ 5.79 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಆಶ್ರಮ ಶಾಲೆ ಉದ್ಘಾಟನೆ ಮಾಡಿದರು.
ರಾಮಾಪುರದಲ್ಲಿ ಮಾತನಾಡಿದ ಸಚಿವ ಎಸ್.ಸುರೇಶ್ ಕುಮಾರ್, ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 27.6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಹಾಗೂ ನಿರ್ಮಾಣ ಮಾಡಬೇಕಿರುವ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು ಅದರಂತೆ ವಾರಾಂತ್ಯ ಕಫ್ರ್ಯೂ ಮೇ.4ರ ತನಕ ಜಾರಿಯಲ್ಲಿರಲಿದೆ. ಅಲ್ಲದೇ ಚಾಮರಾಜನಗರದ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ 2 ಕಟ್ಟಡಗಳನ್ನು ಸಂಪೂರ್ಣವಾಗಿ ಕೋವಿಡ್ ಚಿಕಿತ್ಸೆಗಾಗಿ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಬಹುತೇಕವಾಗಿ ಐಸಿಯು ಆಗಿ ಮಾಡಲು ಸಹ ಚರ್ಚೆ ಮಾಡಲಾಗುತ್ತಿದೆ ಎಂದರು.
ಲಸಿಕೆಗೆ ಹಿಂದೇಟು ಬೇಡ: ಕೊರೋನಾ ಲಸಿಕೆ ಪಡೆಯಲು ಯಾರೂ ಹಿಂದೇಟು ಹಾಕಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶಕುಮಾರ್ ಮನವಿ ಮಾಡಿದರು.
ತಾಲೂಕಿನ ರಾಮಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇ.1 ರಿಂದ 18 ವರ್ಷ ಮೇಲ್ಪ ಟ್ಟವರಿಗೆ ಕೊರೋನಾ ಲಸಿಕೆ ನೀಡ ಲಾಗುತ್ತದೆ. ಅಲ್ಲದೇ ಈಗಾಗ ಲೇ 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ 45 ವರ್ಷ ಮೇಲ್ಪಟ್ಟ ಗಂಭೀರ ಕಾಯಿಲೆಯುಳ್ಳವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಈ ಸಂಬಂಧ ಜಿಲ್ಲೆಯಲ್ಲಿ ಯಾವುದೇ ರೀತಿಯ ತೊಂದರೆ ಯಾಗ ದಂತೆ ಕ್ರಮವಹಿಸಲಾಗುವುದು. ಆದ್ದರಿಂದ ಪ್ರತಿಯೊಬ್ಬರು ಕೊರೋನಾ ಲಸಿಕೆ ಪಡೆಯಬೇಕು. ಲಸಿಕೆ ಪಡೆ ಯುವುದರಿಂದ ಯಾವುದೇ ಪರಿಣಾಮ ಆಗುವುದಿಲ್ಲ. ರಾಜ್ಯಕ್ಕೆ 1 ಕೋಟಿ ಲಸಿಕೆ ಖರೀದಿಸಲು ಮುಖ್ಯಮಂತ್ರಿಗಳು 400 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಗುಣಮುಖರಾಗು ತ್ತಿರುವವರ ಸಂಖ್ಯೆ ಹೆಚ್ಚಾಗಿ ದ್ದು ಅಪಾಯ ಕಡಿಮೆ ಇದೆ. ಸಾವಿನ ಪ್ರಮಾಣವನ್ನು ಅತ್ಯಂತ ಕಡಿಮೆ ಮಾಡ ಬೇಕಿದೆ. ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇದೆ. ಕೋವಿಡ್ ವಿರುದ್ಧದ ಯುದ್ಧದಲ್ಲಿ ಕೊನೆಯ ವಿಜಯದ ನಡಿಗೆ ಜನತೆ ಯದ್ದಾಗಬೇಕಿದೆ. ಐಸಿಯು ಗಿಂತ ಮಾಸ್ಕ್ ಉತ್ತಮ ವಾಗಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸುವ ಅಗತ್ಯವಿದೆ. ಅನಗತ್ಯವಾಗಿ ಹೊರಗೆ ಹೋಗುವುದನ್ನು ನಿಲ್ಲಿಸಬೇಕಿದೆ. ಅಲ್ಲದೇ ಜಿಲ್ಲೆಯಲ್ಲಿ ರೈತರಿಗೆ ಬೇಕಿರುವ ಅಗತ್ಯ ಸಲಕರಣೆಗಳನ್ನು ಪೂರೈಸುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಆರ್.ನರೇಂದ್ರ, ಜಿಪಂ ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಕೇಂದ್ರ ಬರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಜಿಪಂ ಸದಸ್ಯರಾದ ಬಸವರಾಜು, ಶಿವಮ್ಮ, ತಾಪಂ ಅಧ್ಯಕ್ಷೆ ಸವಿತಾ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್, ತಹಸೀಲ್ದಾರ್ ನಾಗರಾಜು, ಡಿವೈಎಸ್ಪಿ ನಾಗರಾಜು ಇತರರಿದ್ದರು.