279 ಜನರಿಗೆ ಕೋವಿಡ್ ಸೋಂಕು ದೃಢ: 157 ಮಂದಿ ಬಿಡುಗಡೆ


*******
ಚಿತ್ರದುರ್ಗ,ಮೇ.14;
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 279 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19,317 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 167, ಚಳ್ಳಕೆರೆ 23, ಹಿರಿಯೂರು 46, ಹೊಳಲ್ಕೆರೆ 17, ಹೊಸದುರ್ಗ 12, ಮೊಳಕಾಲ್ಮುರು ತಾಲ್ಲೂಕಿನಲ್ಲಿ 14 ಪ್ರಕರಣ ಸೇರಿದಂತೆ ಒಟ್ಟು 279 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ  157 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 2154 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 279 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 19,317 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಮೂವರು ಮೃತರಾಗಿದ್ದು ಇದುವರೆಗೆ ಒಟ್ಟು 99 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 17,276 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,942 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,57,918 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 4,43,589 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,22,144 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1391 ಜನರ ವರದಿ ಬರುವುದು ಬಾಕಿ ಇದೆ. 737 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.