ದಾವಣಗೆರೆ ಜಿಲ್ಲೆಯಲ್ಲಿ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದವರನ್ನು ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ಸರ್ಕಾರ ಹಾಗೂ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಸಂಸದರಾದ ಜಿ.ಎಂ.ಸಿದ್ದೇಶ್, ಶಾಸಕರಾದ ಪ್ರೊಫೆಸರ್ ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್, ಜಿಲ್ಲಾ ಪಂಚಾಯತ್ ಸಿಇಒ , ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.