294 ಜನರಿಗೆ ಕೋವಿಡ್ ಸೋಂಕು ದೃಢ: 687 ಮಂದಿ ಬಿಡುಗಡೆ

ಚಿತ್ರದುರ್ಗ,ಜೂ.೮;
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 294 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 32,555ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 78, ಚಳ್ಳಕೆರೆ 53, ಹಿರಿಯೂರು 57, ಹೊಳಲ್ಕೆರೆ 27, ಹೊಸದುರ್ಗ 54, ಮೊಳಕಾಲ್ಮುರು ತಾಲ್ಲೂಕಿನ 25 ಪ್ರಕರಣಗಳು ಸೇರಿದಂತೆ ಒಟ್ಟು 294 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 687 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 1435 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 294 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 32,555ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 157 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 25,664 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 6,734 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 365510 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 5,01,750 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,68,340 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 15 ಜನರ ವರದಿ ಬರುವುದು ಬಾಕಿ ಇದೆ. 840 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.