3ನೇ ಬಾರಿ ಪ್ರಧಾನಿಯಾಗಿ “ನಮೋ’ ಪ್ರಮಾಣ: ಸಂಭ್ರಮಾಚರಣೆ

ಕಮಲಾಪೂರ: ಜೂ.10:ನರೇಂದ್ರ ಮೋದಿ ಅವರು ರವಿವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಮಹಾಗಾಂವ ಕ್ರಾಸ್ ಹಾಗೂ ನಾಗೂರನಲ್ಲಿ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.ಈ ಸಂಭ್ರಮವು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮೋದಿ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸಿದ ವೇಳೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.ಪ್ರಮಾಣ ವಚನ ಸ್ವೀಕರಿಸುವ ವೇಳೆ ಎದ್ದು ನಿಂತು, ಚಪ್ಪಾಳೆ, ಶಿಳ್ಳೆ, ಪಟಾಕಿ, ಹರ್ಷೋದ್ಘಾರ???ಂದಿಗೆ ನಾಯಕರು, ಕಾರ್ಯಕರ್ತರು ಸಂಭ್ರಮಿಸಿದರು. ಜೈ ಜೈ ಮೋದಿ, ಜೈ ಬಿಜೆಪಿ ಘೋಷಣೆಗಳು ಮೊಳಗಿದವು.ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿದ್ದಾರೆ. ಎನ್ ಡಿಎ ಸರ್ಕಾರ ಪರ ಘೋಷಣೆ ಕೂಗಿ, ನಮೋ 3.0 ನರೇಂದ್ರ ಮೋದಿ ಭಾವಚಿತ್ರ ಹಿಡಿದು ಸಂಭ್ರಮಿಸಿದ್ದಾರೆ. ಸಂಭ್ರಮಾಚರಣೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.