30 ಎಕರೆಗೂ ಅಧಿಕ ಕೃಷಿ ಭೂಮಿ ಜಲಾವೃತ: ಅಪಾರ ಪ್ರಮಾಣದ ಬೆಳೆ ಹಾನಿ

ಹುಣಸಗಿ,ಸೆ.8-ಉತ್ತರ ಕರ್ನಾಟಕದ ಬಹುಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹುಣಸಗಿ ತಾಲ್ಲೂಕಿನ ಹಲವೆಡೆ ಹಳ್ಳಕೊಳ್ಳಗಳು ತುಂಬಿ ಹರಿದು ಮೂವತ್ತಕ್ಕೂ ಹೆಚ್ಚು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.
ಇದೀಗ ಸುರಿದಿರುವ ಅಕಾಲಿಕ ಮಳೆಯಿಂದಾಗಿ ಬೆಳೆ ನಿರೀಕ್ಷೆಯಲ್ಲಿದ್ದ ನೂರಾರು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಗದ್ದೆಗಳೆಲ್ಲ ಜಲಾವೃತವಾಗಿವೆ.
ಭತ್ತದ ಬೆಳೆಗಳಿಗೆ ಹಾನಿಯಾಗಿದ್ದು ಸೂಕ್ತ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಜಗದೀಶ್ ಚೌರ್, ಕೆ, ಬಿ,ಜೆ,ಎನ್,ಎಲ್, ಅಧಿಕಾರಿಗಳಾದ ಮಹಾಲಿಂಗರಾಜ್ ಹೊಕ್ರಾಣಿ, ಸುರೇಂದ್ರ, ಬಸವರಾಜ್ ಬಳಿ, ಅನಿಲ ಬಳಿ, ಮಂಜುನಾಥ್ ಬಳಿ, ರಾಜು ಕುಂಬಾರ, ನಿಂಗಪ್ಪ ಅಲಾಲ್, ಸೇರಿದಂತೆ ಇತರರು ಇದ್ದರು.