30 ಗ್ರಾ.ಪಂ ಗಳಲ್ಲಿ ಕೈ ಬಲ: ಖಂಡ್ರೆ ಹರ್ಷ

ಭಾಲ್ಕಿ:ಡಿ.31: ತಾಲೂಕಿನ 30 ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಸ್ಪಷ್ಟ ಬಹುಮತ ಪಡೆದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕರು ಆಗಿರುವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದಲ್ಲಿ ಬುಧವಾರ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರನ್ನು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯದಿದ್ದರೂ ಕೂಡ 40 ಗ್ರಾಪಂಗಳ ಪೈಕಿ 30ಕ್ಕೂ ಅಧಿಕ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಖುಷಿ ತಂದು ಕೊಟ್ಟಿದೆ. ನಾನು ಮಂತ್ರಿ ಇದ್ದ ಸಂದರ್ಭದಲ್ಲಿ ಹಾಗೂ ಶಾಸಕನಾಗಿ ಕಳೆದ 11 ವರ್ಷಗಳಿಂದ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳೇ ಕಾಂಗ್ರೆಸ್ ಬೆಂಬಲಿತರ ಗೆಲುವಿಗೆ ಶ್ರೀರಕ್ಷೆ ಆಗಿವೆ. ಗೆಲುವು ಸಾಧಿಸಿದ ಎಲ್ಲ ಕಾಂಗ್ರೆಸ್ ಬೆಂಬಲಿತರು ಗ್ರಾಮೀಣ ಭಾಗದಲ್ಲಿ ಉತ್ತಮ ಕಾರ್ಯ ಮಾಡಿ ಗ್ರಾಮ ಮತ್ತು ಪಕ್ಷಕ್ಕೆ ಹೆಸರು ತಂದು ಕೊಡಬೇಕು ಎಂದು ತಿಳಿಸಿದರು.