31 ರಂದು ಸರ್ದಾರ್ ವಲ್ಲಭಭಾಯ್ ಪಟೇಲ್ ರ ಜಯಂತಿ ಆಚರಣೆ

ಕಲಬುರಗಿ:ಅ.30:ಪ್ರತಿ ವರ್ಷದಂತೆ ಈ ವರ್ಷವು ಸಹ ಭಾರತದ ಎಕತಾ ಪುರುಷ್ಯ ಮತ್ತು ದೇಶದ ಮೊದಲನೇ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ರವರ ಜನ್ಮದಿನಾಚರಣೆಯನ್ನು ಪಟೇಲ್ ವೃತ್ತದಲ್ಲಿ ಉಕ್ಕಿನ ಮನುಷ್ಯನಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಗುವದು.
ಅಂದು ದಿನಾಂಕ 31.10.23 ರಂದು ಬೆಳಗ್ಗೆ 9.30 ಗಂಟೆಗೆ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಜರುಗುವ ಗೌರವ ನಮನ ಕಾರ್ಯಕ್ರಮಕ್ಕೆ ಜಿಲ್ಲೆಯ ಸಚಿವರು,ಕೆಕೆಆರ್ ಡಿಬಿಯ ಅಧ್ಯಕ್ಷರು, ಜನಪ್ರತಿನಿಧಿಗಳು ಆಯಾ ರಾಜಕೀಯ ಪಕ್ಷಗಳ ಮುಖಂಡರು, ಪ್ರದೇಶದ, ಜಿಲ್ಲೆಯ ಮತ್ತು ಪಾಲಿಕೆಯ ಅಧಿಕಾರಿಗಳು
ಸಂಘ ಸಂಸ್ಥೆಗಳಿಗಳ ಮುಖಂಡರು, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಮುಖಂಡರು, ಸದಸ್ಯರು ಈ ಮಹತ್ವದ ಕಾರ್ಯಕ್ರಮಕ್ಕೆ ತಪ್ಪದೆ ಹಾಜರಾಗಲು ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ ದಸ್ತಿಯವರು ಪ್ರಕಟಣೆ ಮೂಲಕ ಕೋರಿರುತ್ತಾರೆ.