ಲಕ್ಷ್ಮೇಶ್ವರ: ಸಮೀಪದ ಶಿಗ್ಲಿಯಿಂದ ಒಡೆಯರಮಲ್ಲಾಪುರ ಗ್ರಾಮಕ್ಕೆ ಸಂಕರ್ಪ ಕಲ್ಪಿಸುವ ಮುಖ್ಯ ರಸ್ತೆಯ ಎಡ ಬಲಕ್ಕೆ ಪೀಕಜಾಲಿ ಮುಳ್ಳಿನ ಕಂಟಿಗಳು ಬೆಳೆದು ನಿಂತು ರಸ್ತೆಯನ್ನು ಕಿರಿದಾಗಿಸಿವೆ. ಕಂಟಿಗಳು ಆಳೆತ್ತರಕ್ಕೆ ಬೆಳೆದಿರುವುದರಿಂದ ಮುಂದೆ ಬರುವ ವಾಹನಗಳು ಸರಿಯಾಗಿ ಕಾಣಿಸುವುದಿಲ್ಲ. ಹೀಗಾಗಿ ಇಲ್ಲಿ ಯಾವಾಗಬೇಕಾದರೂ ಅಪಘಾತ ಸಂಭವಿಸುವ ಪರಿಸ್ಥಿತಿ ಇದೆ.
ರಸ್ತೆಯನ್ನು ಮರೆಮಾಚಿರುವ ಮುಳ್ಳಿನ ಕಂಟಿಗಳನ್ನು ತೆಗೆಯಬೇಕಾಗಿತ್ತು. ಆದರೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಹೀಗಾಗಿ ಕಂಟಿಗಳು