ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ನಿರುದ್ಯೋಗ ದಿನವಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಚರಿಸಿ ಉದ್ಯೋಗ ಕಲ್ಪಿಸದ ಪ್ರಧಾನಿ ನರೇಂದ್ರಮೋದಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.