ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಲಕ್ಷೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಮತ್ತು ಬ್ರೆಡ್ ವಿತರಿಸಿದರು.
ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ದುಂಡೇಶ್ ಕೊಟಗಿ ಶಿರಹಟ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಮೆಣಸಿನಕಾಯಿ ರಮೇಶ್ ಹಾಳತೋಟದ ವಿಶಾಲ್ ಬಟಗುರ್ಕಿ ಸೇರಿದಂತೆ ಅನೇಕರಿದ್ದರು.