ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಠಿಕ ಸಪ್ತಾಹ ಶಿಬಿರ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ದೇವರಾಜ ಕಾಲೋನಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರದ ಬಗ್ಗೆ ಅರಿವು ಮತ್ತು ಬಳಕೆ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಪಾಲಿಕೆ ಸದಸ್ಯರಾದ ಶಾಂತಮ್ಮ ವಡಿವೇಲು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪದ್ಮ ಮತ್ತು ಅಧಿಕಾರಿಗಳು ಭಾಗಿಯಾಗಿದ್ದರು.