ಶ್ರೀ ಶಿರಡಿ ಸಾಯಿಬಾಬಾ ಮಂದಿರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಇವರ ಸಹಯೋಗದಲ್ಲಿ ನಗರದ ಹಳೇ ಕೋರ್ಟ್ ಹತ್ತಿರ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಕಾರ್ತಿಕ ಮಾಸದ ನಿಮಿತ್ತ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಗೀತ ಕಲಾವಿದರಾದ ಗಾಯಿತ್ರಿ ಎಸ್. ಬಾಕಳೆ ಇವರು ಸಂಗೀತ ಕಾರ್ಯಕ್ರಮ ನೀಡಿದರು. ನಾಗರಾಜ ಪಿಳ್ಳೆ ತಬಲಾ ಸಾಥ್ ಹಾಗೂ ಶ್ರೀಕಾಂತ್ ಬಾಕಳೆ ಹಾರ್ಮೋನಿಯಂ ಸಾಥ್ ನೀಡಿದರು.