ಮುಂಡಗೋಡ ತಾಲೂಕಿನ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಕಾರು ಕೆರೆಗೆ ಬಿದ್ದ ಪರಿಣಾಮ ಅರಶಿಣಗೇರಿ ಗ್ರಾಮದ ರಾಜು ವರ್ಗಿಸ್ ಹಾಗೂ ಶ್ರೀಮತಿ ಬ್ಲೆಸ್ಸಿ ದಂಪತಿಗಳು ಮೃತಪಟ್ಟ ಘಟನೆ ಸಂಭವಿಸಿದ್ದು, ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಮುಂಡಗೋಡದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಉಮೇಶ್ ಬಿಜಾಪುರ, ಕೆ.ಸಿ. ಗಲಭಿ, ಸಂಜೀವ್ ಪೀಶೆ ಮತ್ತಿತರರು ಉಪಸ್ಥಿತರಿದ್ದರು.