ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಪರೀಕ್ಷೆಯಾಗಿ ನಡೆಸುವ ಹಠಾತ್ ಹೇರಿಕೆ ಹಿಂಪಡೆಯಲು ಆಗ್ರಹಿಸಿ ಎಐಡಿಎಸ್‍ಓ ಕರ್ನಾಟಕ ರಾಜ್ಯ ಸಮಿತಿ ಅಖಿಲ ಕರ್ನಾಟಕ ಪ್ರತಿಭಟನೆ ದಿನಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಎಐಡಿಎಸ್‍ಓ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಛೇರಿ ಎದುರುಗಡೆ ಪ್ರತಿಭಟನೆ ಮಾಡಲಾಯಿತು.