ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ವತಿಯಿಂದ ನಮ್ಮೂರ ಹೆಮ್ಮೆ ಎಂಬ ಶೀರ್ಷಿಕೆಯಡಿಯಲ್ಲಿ ವಿಧ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ನಗರದ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ‌ ನಡೆದ ಕಾರ್ಯಕ್ರಮದಲ್ಲಿ‌ ಮೈಸೂರು ‌ಭಾಗದಲ್ಲಿ ಉತ್ತಮ‌ ಅಂಕಗಳನ್ನು ಗಳಿಸಿದ ವಿಧ್ಯಾರ್ಥಿ , ವಿಧ್ಯಾರ್ಥಿನಿಯರನ್ನು ಗುರುತಿಸಿ , ಪ್ರೋತ್ಸಾಹಿಸುವ ಸಲುವಾಗಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ರಫೀಕ್ ಅಲಿ, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಆರ್ ಮೂರ್ತಿ, ಧರ್ಮಸೇನಾ, ಪ್ರಶಾಂತ್ , ಸೈಯದ್ ರಿಸ್ವಾನ್, ರಜತ್ , ದರ್ಶನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.