ಧಾರವಾಡ ಸ್ಥಳಿಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಲೀಂ ಅಹ್ಮದ ಅವರನ್ನು ಹುಬ್ಬಳ್ಳಿಯ ಕಾರವಾರ ರಸ್ತೆಯ ಕಾಂಗ್ರೆಸ್ ಕಛೇರಿಯಲ್ಲಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಸೇವಾದಳ ಘಟಕದ ಉಪಾಧ್ಯಕ್ಷೆ ಸಂಗೀತಾ ಸಂಘಮಿ ಅವರು ಸನ್ಮಾನಿಸಿದರು. ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅನೀಲಕುಮಾರ ಪಾಟೀಲ, ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷೆ ಮನೋರಾಮ ವಿ.ಬಿ ಸೇರಿದಂತೆ ಉಪಸ್ಥಿತರಿದ್ದರು.