ಮಾಜಿ ಮುಖ್ಯಮಂತ್ರಿ, ಶಾಸಕರಾದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಜನತಾ ಬಜಾರ್‍ಗೆ ಭೇಟಿ ನೀಡಿ, ಹು-ಧಾ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಾಣವಾಗುತ್ತಿರುವ ಸೂಪರ್ ಮಾರ್ಕೆಟ್‍ನ ಕಟ್ಟಡ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದರು. ಬಳಿಕ ಅಲ್ಲಿನ ವ್ಯಾಪಾರಿಗಳ ಕುಂದುಕೊರತೆಗಳನ್ನು ಆಲಿಸಿ, ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು, ಅವರೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.