ಬಾಗಲಕೋಟೆ ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಣ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್ ಮಾಲಾರ್ಪಣೆ ಮಾಡಿ ಪುಷ್ಪ ಅರ್ಪಿಸಿದರು.