ಪಿ.ಟಿ.ಸಿ.ಎಲ್. ಕಾಯ್ದೆಗೆ ಸಮಗ್ರ ತಿದ್ದುಪಡಿ ತರುವ ಮಸೂದೆಯ ಕರಡನ್ನು ಸಚಿವ ಸಂಪುಟದಲ್ಲಿ ಅನುಮೋದಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.