371ನೇ ಕಲಂ ಪರಿಣಾಮಕಾರಿ ಅನುಷ್ಠಾನ ಮತ್ತು ಕಲ್ಯಾಣದ ಅಭಿವೃದ್ಧಿಯ ಮಹತ್ವದ ಸಭೆ

ಕಲಬುರಗಿ,ಮಾ.24: ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೆಶಕ್ಕೆ ಜಾರಿಯಾಗಿರುವ ಸಂವಿಧಾನದ 371ನೇ(ಜೆ) ಕಲಂ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಸರ್ವಾಂಗೀಣ ಅಭಿವೃದ್ಧಿಯ ಕುರಿತು ಬರುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಬೇಕಾದ ವಿಷಯಗಳ ಕುರಿತು ಚರ್ಚಿಸಿ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ಲಕ್ಷಣ ದಸ್ತಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆಯನ್ನು ದಿನಾಂಕ : 26.03.2023 ರಂದು ರವಿವಾರ ಮುಂಜಾನೆ 11.30 ಗಂಟೆಗೆ ಹಿಂದಿ ಪ್ರಚಾರ ಸಭಾಂಗಣದಲ್ಲಿ ಸಮಿತಿಯ ಕ್ರೀಯಾ ಸದಸ್ಯರ ಮತ್ತು ಅಭಿವೃದ್ಧಿಪರ ಚಿಂತಕರ ಸಭೆಯನ್ನು ನಿಯೋಜಿಸಲಾಗಿದೆ.
ಈ ಸಭೆಯಲ್ಲಿ 37ನೇ(ಜೆ) ಕಲಂ ಅಡಿಯಲ್ಲಿ ನೇಮಕಾತಿ ಮತ್ತು ಮುಂಬಡ್ತಿಗಳಲ್ಲಿ ಆಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನಿವಾರಿಸಲು, ಪ್ರತ್ಯೇಕ ಸಚಿವಾಲಯ ಸೇರಿದಂತೆ, ಕಲ್ಯಾಣ ಕರ್ನಾಟಕದ ನೀರಾವರಿ, ಕೈಗಾರಿಕೆ, ರಸ್ತೆ ಸಾರಿಗೆ, ರೈಲ್ವೆ ಕ್ಷೇತ್ರ, ಶಿಕ್ಷಣ ಮುಂತಾಗಿ ಎಲ್ಲಾ ಕ್ಷೇತ್ರದ ರಚನಾತ್ಮಕ ಅಭಿವೃದ್ಧಿಯ ವಿಷಯಗಳ ಬಗ್ಗೆ ಚರ್ಚಿಸಿ ಎಲ್ಲರ ಸಲಹೆ ಸೂಚನೆಗಳನ್ನು ಪಡೆದು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಈ ಮಹತ್ವದ ಸಭೆಗೆ ಸಮಿತಿಯ ಎಲ್ಲಾ ಕ್ರೀಯಾ ಸದಸ್ಯರು ಸರಿಯಾದ ಸಮಯಕ್ಕೆ ಹಾಜರಾಗಲು ಕೋರಲಾಗಿದೆ ಎಂದು ಲಕ್ಷಣ ದಸ್ತಿ ತಿಳಿಸಿದ್ದಾರೆ.