ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 65ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ನಗರದ ಸ್ಟೇಶನ್ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ದೊರೆರಾಜ್ ಮಣಿಕುಂಟ್ಲ, ಮೆಹಮೂದ್ ಕೋಳೂರ, ಪ್ರಸನ್ನ ಮಿರಜಕರ್, ವಿಜನಗೌಡ ಪಾಟೀಲ, ಸದಾನಂದ ಡಂಗನವರ ಇತರರು ಇದ್ದರು.