ಮತಾಂತರ ನಿಷೇಧ ಕಾಯ್ದೆ ಮತ್ತು ಕೈಸ್ತರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ವತಿಯಿಂದ ರಾಮನಗರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಫಾದರ್ ಅಲೆಕ್ಸ್ ಅಲೆಕ್ಸಾಂಡರ್, ಪಾಸ್ಟರ್ ಅಭಿಷೇಕ್ ದೇವ ಅಯ್ಯಾ ಮತ್ತಿತರರು ಭಾಗವಹಿಸಿದ್ದರು.