ಕಲಬುರಗಿ: ರೈತ ಅನುವುಗಾರರ ಸೇವೆಯನ್ನು ಮೊಟಕುಗೊಳಿಸುವ ರಾಜ್ಯ ಸರ್ಕಾರದ ಹುನ್ನಾರವನ್ನು ವಿರೋಧಿಸಿ ಬುಧವಾರ ಬೆಳಿಗ್ಗೆ ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಎಸ್. ಹಿರೇಮಠ್ ಅವರ ನೇತೃತ್ವದಲ್ಲಿ ರೈತ ಸಂಘಟನೆಗಳ ಕಾರ್ಯಕರ್ತರು ಆಳಂದ್ ಚೆಕ್‍ಪೋಸ್ಟ್ ಬಳಿ ಇರುವ ಕೃಷಿ ವಿಶ್ವವಿದ್ಯಾಲಯದ ಬಳಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.