ಹರಪನಹಳ್ಳಿ ಮತ್ತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಗಳನ್ನು ಶೀಘ್ರ ಮೇಲ್ದರ್ಜೆಗೇರಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬ್ಬಂದಿ ಸಂಖ್ಯೆ ಹೆಚ್ಚಳ ಮಾಡಿದರೆ ಸುವ್ಯವಸ್ಥೆ ಕಾಪಾಡಲು ಸಹಕಾರಿ ಆಗುತ್ತದೆ’ ಎಂದು ಹೇಳಿದರು.