39 ಮಕ್ಕಳಿಗೆ ಒಂದೇ ಸಿರಿಂಜ್ ಬಳಸಿ ಕೋವಿಡ್ ಲಸಿಕೆ: ಸಿಬ್ಬಂದಿ ವಿರುಧ್ಧ ಎಫ್ ಐಆರ್

ಸಾಗರ್, (ಮಧ್ಯಪ್ರದೇಶ), ಜು.28- ಒಂದೇ ಸಿರಿಂಜ್ ಮೂಲಕ 39 ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣ ಮಧ್ಯಪ್ರದೇಶದ ಸಾಗರ್ ನಗರದ ಖಾಸಗಿ ಶಾಲೆಯಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಂದೇ ಸಿರಿಂಜ್ ಬಳಸಿ ಲಸಿಕೆ ನೀಡುತ್ತಿರುವುದನ್ನು ಗಮನಿಸಿದ ಕೆಲವು ಪೋಷಕರು ಸಿಬ್ಬಂದಿಯ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಸಿಕೆ ಹಾಕಿದ ಸಿಬ್ಬಂದಿ ಜಿತೇಂದ್ರ ಅಹಿರ್ವಾರ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಲಸಿಕೆಯ ಅಭಿಯಾನದ ಅಂಗವಾಗಿ ನಗರದ ಜೈನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಲಸಿಕೆ ಹಾಕುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಪೋಷಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಂತೆ ಜಿತೇಂದ್ರ ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.