4 ದಿನ ರಾಜ್ಯದಲ್ಲಿ ಮಳೆ

ಬೆಂಗಳೂರು, ಎ. ೨೨: ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗುತ್ತಿದೆ. ಕೆಲವೆಡೆ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ವರ್ಷಧಾರೆಯಾಗುತ್ತಿದೆ.
ಈ ನಡುವೆ, ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ, ಅಕಾಲಿಕ ಮಳೆ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ ೨೫ ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ವರ್ಷಧಾರೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಉಳಿದಂತೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗುಡುಗು ಸಾಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ವ್ಯಕ್ತಪಡಿಸಲಾಗಿದ್ದು, ಹವಮಾನ ಇಲಾಖೆಯು ಯಲ್ಲೋ ಅಲಟರ್? ಘೋಷಿಸಿದೆ.
ಸುಡು ಬಿಸಿಲು: ರಾಜ್ಯಾದ್ಯಂತ ಸದ್ಯ ಸುಡು ಬಿಸಿಲು ಬೀಳುತ್ತಿದೆ. ಅಕಾಲಿಕ ಮಳೆಯಿಂದ ನಾಗರೀಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಜೊತೆಗೆ ಕುಡಿಯುವ ನೀರಿನ ಹಾಹಾಕಾರವು ಕಡಿಮೆಯಾಗಿಸಿದೆ.
ಆದರೆ ಹಲವೆಡೆ ಬಿದ್ದ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ಮಳೆಯು ಬೆಳೆಗಳಿಗೆ ಹಾನಿಯುಂಟು ಮಾಡಿದೆ. ಗಿಡಮರಗಳು ಧರಾಶಾಹಿಯಾಗಿಸಿದೆ.