ಶಹಾಪುರ:ಜೂ.14: ಕರ್ನಾಟಕ ಸರಕಾರದ ಸಣ್ಣ ಕೈಗಾರಿಕೆ ಸಚಿವ ಶರಣಬಸಪಗೌಡ ದರ್ಶನಾಪುರ ಅವರಿಗೆ ಹೆಚ್ಚುವರಿಯಾಗಿ ಸರಕಾರದ 4 ಅಭಿವೃದ್ಧಿ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಗೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆರ್.ರಾಜಶೇಖರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿ,ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿ. ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿ ಹಾಗೂ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ. ಸಣ್ಣ ಕೈಗಾರಿಕೆ ಸಚಿವ ಸ್ಥಾನದೊಂದಿಗೆ ಹೆಚ್ಚುವರಿಯಾಗಿ 4ನಿಗಮಗಳಿಗೆ ಈ ನೇಮಕಗೊಳಿಸಿ ಆದೇಶದ ಮಾಡಿದ್ದಾರೆ ಅವರು ಅಭಿಮಾನಿಗಳು ಹರ್ಷಾ ವ್ಯಕ್ತಪಡಿಸಿ ಸಂಭ್ರಮಾಚರಣೆ ಮಾಡಿದರು