40ನೇ ವಾರ್ಡಿನಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ

ದಾವಣಗೆರೆ,ಏ.19- ನಗರದ 40ನೇ ವಾರ್ಡಿನಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ನಡೆಯಿತು. ಬಿಜೆಪಿ ಮುಖಂಡ, ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಿರ್ದೇಶಕ ತ್ಯಾವಣಿಗಿ ವೀರಭದ್ರಸ್ವಾಮಿ ಇವರಿಗೆ ಲಸಿಕೆ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್. ಮಾಜಿ ಮುಖ್ಯ ಸಚೇತಕ ಎ.ಹೆಚ್. ಶಿವಯೋಗಿ ಸ್ವಾಮಿ, ಈ ಭಾಗದ ಪಾಲಿಕೆ ಸದಸ್ಯರಾದ ವೀಣಾ ನಂಜಪ್ಪ, ಅರುಣ್ ನಂಜಪ್ಪ, ಬಿಜೆಪಿ ಮುಖಂಡರಾದ ಹೇಮಂತ್ ಕುಮಾರ್,ಡಿ.ಎಸ್. ಶಿವಶಂಕರ್, ಲಿಂಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ನಾಗರಾಜ್,  ಮೇಯರ್ ಎಸ್.ಟಿ. ವೀರೇಶ್, ಆಯುಕ್ತರಾದ ವಿಶ್ವನಾಥ್ ಮುದಜ್ಜಿ, ವಿವೇಕಾನಂದ ಬಡಾವಣೆಯ ಹಿತರಕ್ಷಣಾ ಸಮಿತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು