40 ಕ್ಕೂ ಹೆಚ್ಚು ಮಂದಿ ಗಾಯ

ಹನೂರು: ಸಂಬಂಧಿಕರ ಶವ ಸಂಸ್ಕಾರಕ್ಕೆ ಹೋಗಿ ಈಚರ್ ವಾಹನದ ಮೂಲಕ ವಾಪಸ್ ಆಗುತ್ತಿದ್ದ 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲ್ಲೂಕಿನ ಹಲಗಪುರ ಹಾಗೂ ಶಾಗ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ನಿಧನರಾಗಿದ್ದ ಸಂಬಂಧಿಕರ ಶವ ಸಂಸ್ಕಾರ ಮುಗಿಸಿ ಹುತ್ತೂರು ಗ್ರಾಮಕ್ಕೆ ವಾಪಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ಜರುಗಿದ್ದು, 5 ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದರೆ 35 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಪ್ರಕಾಶ್ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೇಗಾಲ, ಮೈಸೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ವಿವಿಧ ವಾಹನಗಳ ಮೂಲಕ ಕರೆದೊಯ್ಯದರು.