400 ಮೆ.ಟನ್ ಆಮ್ಲಜನಕ ಜೆಎಸ್‌ಡಬ್ಲ್ಯು ಪೂರೈಕೆ

ದೆಹಲಿ, ಎ.೨೧- ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಕೆಲವು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗಿದೆ. ಇದೀಗ ಕರ್ನಾಟಕದಲ್ಲೂ ಆಮ್ಲಜನಕದ ಕೊರತೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜೆಎಸ್‌ಡಬ್ಲ್ಯು ಸ್ಟೀಲ್ ಕಂಪನಿ ವತಿಯಿಂದ ಕರ್ನಾಟಕಕ್ಕೆ ಸುಮಾರು ೪೦೦ ಮೆಟ್ರಿಕ್ ಟನ್ ಆಮ್ಲಜನಕ ಒದಗಿಸಲಿದೆ.
ಸಚಿವ ಮುರುಗೇಶ್ ನಿರಾಣಿ ಹಾಗೂ ಜೆಎಸ್‌ಡಬ್ಲ್ಯು ಅಧಿಕಾರಿಗಳ ನಡುವೆ ನಡೆದ ಮಾತುಕತೆಯ ನಂತರ ಈ ನಿರ್ಣಯ ಹೊರಬಿದ್ದಿದೆ. ಜೆಎಸ್‌ಡಬ್ಲ್ಯು ಪರವಾಗಿ ಉಪ ವ್ಯವಸ್ಥಾಪಕ ನಿರ್ದೇಶಕ ಡಾ. ವಿನೋದ್ ನೊವಾಲ್ ಭಾಗವಹಿಸಿದ್ದರು. ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ದಾಖಲಾಗುತ್ತಿರುವ ಕಳವಳಕಾರಿ ಸಂಗತಿ ನಡುವೆಯೇ ನಿರಾಣಿ ಅವರು ಜೆಎಸ್‌ಡಬ್ಲ್ಯು ಅಧಿಕಾರಿಗಳ ಸಭೆ ಕರೆದಿದ್ದು, ಮಾತುಕತೆ ಫಲಪ್ರದವಾಗಿದೆ.
ಈ ಹಿನ್ನೆಲೆಯಲ್ಲಿ ಜೆಎಸ್‌ಡಬ್ಲ್ಯು ರಾಜ್ಯಕ್ಕೆ ೪೦೦ ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಲಿದೆ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆ ದಾಖಲಾಗುತ್ತಿದ್ದು, ಮುಂದೆ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.