41 ಕಾರ್ಮಿಕರ ರಕ್ಷಣೆ ಸಿಎಂ ಸಂತಸ

ಬೆಂಗಳೂರುನ.28-ಸತತ ಹದಿನೇಳು ದಿನಗಳ ರಕ್ಷಣಾ ಕಾರ್ಯಾಚರಣೆ ನಂತರ ಉತ್ತರಾಖಂಡದ ಸುರಂಗದೊಳಗೆ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿರುವುದು ನೋಡಿ ಅತ್ಯಂತ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಸವಾಲಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ರಕ್ಷಣಾ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿದ್ದಾರೆ.
ನಿಮ್ಮ ಶ್ರಮ ಮತ್ತು ನಿರಂತರ ಪ್ರಯತ್ನದಿಂದ ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕರಿಗೆ ಮರುಹುಟ್ಟು ಸಿಕ್ಕಂತಾಗಿದೆ. ಕೋಟ್ಯಂತರ ಭಾರತೀಯರ ಹಾರೈಕೆಗಳು, ಕಾರ್ಮಿಕರ ಕುಟುಂಬ ಸದಸ್ಯರ ಪ್ರಾರ್ಥನೆ ಈ ಕ್ಷಣ ಫಲ ನೀಡಿದೆ ಎಂದು ಅವರು ಬಣ್ಣಿಸಿದ್ದಾರೆ.