431 ಜನರಿಗೆ ಕೋವಿಡ್ ಸೋಂಕು ದೃಢ: 453 ಮಂದಿ ಬಿಡುಗಡೆ

ಚಿತ್ರದುರ್ಗ,ಮೇ.27; ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 431 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25,852 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 149, ಚಳ್ಳಕೆರೆ 43, ಹಿರಿಯೂರು 77, ಹೊಳಲ್ಕೆರೆ 19, ಹೊಸದುರ್ಗ 91, ಮೊಳಕಾಲ್ಮುರು ತಾಲ್ಲೂಕಿನಲ್ಲಿ 52 ಸೇರಿದಂತೆ ಒಟ್ಟು 431 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ ಸೋಂಕಿತರುಗಳಿಗಿಂತ ಬಿಡುಗಡೆಯಾದವರು ಹೆಚ್ಚಿದ್ದು 453 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 2158 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 431 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 25,852 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 135 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 20,228 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 5,489 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 233464 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,71,210 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,44,541 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 25 ಜನರ ವರದಿ ಬರುವುದು ಬಾಕಿ ಇದೆ. 792 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.