ಕಲಬುರಗಿ : ಹಡಪದ (ಕ್ಷೌರಿಕ) ಸಮಾಜದ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಹಡಪದ (ಕ್ಷೌರಿಕ) ಸಮಾಜ ಸೇವಾ ಸಂಘ ಜಿಲ್ಲಾಘಟಕದ ವತಿಯಿಂದ ಇಂದು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.