`45′  ಚಿತ್ರೀಕರಣ ಬಿರುಸು

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ “45” ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರದ ಚಿತ್ರೀಕರಣ  ಬಿರುಸಿನಿಂದ ಸಾಗಿದೆ.

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ  ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ “45

 ಬನ್ನೇರುಘಟ್ಟದ ಶ್ರೀಚಂಪಕಧಾಮ ಸ್ವಾಮಿ ದೇವಸ್ಥಾನದ ಬಳಿ ಚಿತ್ರದ ಅದ್ದೂರಿ ಸನ್ನಿವೇಶವೊಂದರ ಚಿತ್ರೀಕರಣ ನಡೆದಿದೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ಸನ್ನಿವೇಶದಲ್ಲಿ ಪಾಲ್ಗೊಂಡಿದ್ದರು.

ಮೋಕೋಬೋಲ್ಟ್, ರೋಪ್ ಕ್ಯಾಮೆರಾ ಸೇರಿದಂತೆ ಇನ್ನೂ ಹಲವು ದುಬಾರಿ ಸಲಕರಣೆಗಳ ಬಳಸಿ ಈ ದೃಶ್ಯವನ್ನು ಚಿತ್ರಿಸಲಾಗಿದೆ. ಒಂದು ಸನ್ನಿವೇಶಕ್ಕಾಗಿ 418 ಕ್ಕೂ ಹೆಚ್ಚು ಕಲರ್ ಬಾಂಬ್ ಗಳನ್ನು ಬಳಸಿರುವುದು ಕನ್ನಡದಲ್ಲಿ ಇದೇ ಮೊದಲು. ಈ ಅದ್ದೂರಿ ಸನ್ನಿವೇಶಕ್ಕೆ ಭಾರತ ಚಿತ್ರರಂಗದ ಜನಪ್ರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ನೃತ್ಯ ಸಂಯೋಜನೆ ಮಾಡಿರುವುದು ವಿಶೇಷ. ಸತ್ಯ ಹೆಗಡೆ ಛಾಯಾಗ್ರಹಣ ಈ ಅದ್ದೂರಿ ಸನ್ನಿವೇಶದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

 “ಗಾಳಿಪಟ 2” ಸೇರಿದಂತೆ ಅನೇಕ ಅದ್ದೂರಿ ಹಾಗೂ ಸದಭಿರುಚಿಯ ಚಿತ್ರ ನೀಡುತ್ತಾ ಬಂದಿರುವ ರಮೇಶ್ ರೆಡ್ಡಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ  ಚಿತ್ರದ ಬಿಡುಗಡೆಗೆ ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.‌ ಸಂಗೀತದಲ್ಲಿ ಜನರ ಮನ ಗೆದ್ದಿರುವ ಅರ್ಜುನ್ ಜನ್ಯ ನಿರ್ದೇಶಕನಾಗಿಯೂ ಜನಪ್ರಿಯತೆ ಪಡೆಯುವುದು ಖಂಡಿತ ಎನ್ನುವ ಮಾತು ಕೇಳಿ ಬಂದಿದೆ.

ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರಂತಹ ಅದ್ಭುತ ಕಲಾವಿದರನ್ನು ಒಂದೇ ಚಿತ್ರದಲ್ಲಿ ನೋಡುವುದು ಸಿನಿರಸಿಕರಿಗಂತೂ ಹಬ್ಬವೇ ಸರಿ.

ಕುತೂಹಲ ಹೆಚ್ಚಳ

45. ಚಿತ್ರ ವಿವಿಧ ಕಾರಣದಿಂದ ಕುತೂಹಲ ಹೆಚ್ಚುವಂತೆ ಮಾಡಿದೆ. ರಮೇಶ್ ರೆಡ್ಡಿ ನಿರ್ಮಾಣ ಒಂದೆಡೆಯಾದರೆ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬಹು ವರ್ಷದ ನಂತರ ಶಿವಣ್ಣ ಮತ್ತು ಉಪೇಂದ್ರ ಮತ್ತೊಮ್ಮೆ ಜೊತೆಯಾಗಿ ನಟಿಸುತ್ತಿದ್ದಾರೆ. ಹೀಗಾಗಿ ಚಿತ್ರ ಕುತೂಹಲ ಹೆಚ್ಚುವಂತೆ ಮಾಡಿದೆ