45 ವರ್ಷ ದಾಟಿದ ಕೇಂದ್ರ ಸರ್ಕಾರಿ ನೌಕರರು ಲಸಿಕೆ ಪಡೆಯಲು ಸೂಚನೆ

ನವದೆಹಲಿ, ಏ.6- ದೇಶದಲ್ಲಿ ಕೊರೋನಾ‌ ಸೋಂಕು ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 45 ವರ್ಷ ದಾಟಿದ ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರು ಸ್ವಯಂಪ್ರೇರಿತವಾಗಿ ಲಸಿಕೆ ಪಡೆಯುವ ಮೂಲಕ ಕೋವಿಡ್ ಸೋಂಕಿನಿಂದ ದೂರ ಇರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ 45 ವರ್ಷ ದಾಟಿದ ಕೇಂದ್ರ ಸರಕಾರಿ ನೌಕರರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಮತ್ತು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದೆ.

ಕೇಂದ್ರ ಸರ್ಕಾರಿ ನೌಕರರು ಲಸಿಕೆ ಪಡೆದ ನಂತರವೂ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವುದು ಸರಿಯಲ್ಲ ಎಂದು ತಿಳಿಸಲಾಗಿದೆ

ದೇಶದಲ್ಲಿ ಎರಡನೇ ಹಂತದ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಪ್ರತಿನಿತ್ಯ ಒಂದು ಲಕ್ಷ ಹಾಜುಬಾಜಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ ಇದು ಆತಂಕದ ಬೆಳವಣಿಗೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಮೊದಲ ಹಂತದ ಅಲೆಯಿಂದ ಎರಡನೇ ಹಂತದ ಅಲೆಯಿರುವಾಗ ಪ್ರಸರಣವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಲು ಒತ್ತು ನೀಡಬೇಕು ಎಂದು ಕೂಡ ಸೂಚನೆ ನೀಡಿದೆ

ಈ ನಡುವೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಲಸಿಕೆಯನ್ನು ಎಲ್ಲರಿಗೂ ಹಾಕಲ ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ