45 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕೆ ಕಾರ್ಯಕ್ರಮ

ಗಂಗಾವತಿ ಏ 03 : ತಾಲೂಕಿನ ಡಣಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಪಂನಿಂದ ಹಮ್ಮಿಕೊಂಡಿದ್ದ 45 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕೆ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಅವರು ಚಾಲನೆ ನೀಡಿದರು.
‘ಕರೊನಾ ಎರಡನೇ ಅಲೆ ಶುರುವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕರೊನಾ ವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಬೇಕು. ವ್ಯಾಕ್ಸಿನಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ’ ಎಂದು ತಾಪಂ ಇಒ ಡಾ.ಡಿ.ಮೋಹನ್ ಮಾಹಿತಿ ನೀಡಿದರು.
ತಾಪಂ ಸದಸ್ಯರಾದ ಫಕೀರಪ್ಪ, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಶರಣಪ್ಪ, ಪಿಡಿಒ ನೀಲಾ ಸೂರ್ಯಕುಮಾರಿ, ಆರೋಗ್ಯ ಇಲಾಖೆಯ ಶರಣಬಸವ ಸೇರಿ ಇತರರು ಇದ್ದರು.