464 ಸಾವು-14304 ಸೋಂಕು ಒಂದೇ ದಿನ 29271 ಮಂದಿ ಚೇತರಿಕೆ

ಬೆಂಗಳೂರು, ಜೂ. 1-ರಾಜ್ಯದಲ್ಲಿಂದು ಒಂದೇ ದಿನ 464 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಮೃತರ ಸಂಖ್ಯೆ 29554ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ.
ಇಂದು ರಾಜ್ಯದಲ್ಲಿ ಆಸ್ಪತ್ರೆಯಿಂದ 29,271 ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2290861ಕ್ಕೆ
ಏರಿದೆ.
ಇಂದು 14304 ಮಂದಿಗೆ ಹೊಸ ಸೋಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 298299 ಪ್ರಕರಣಗಳಿಗೆ ಹೆಚ್ವಳವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಇಂದು 276 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಮೃತರ ಸಂಖ್ಯೆ 13662ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯತ್ತ ಸಾಗಿದೆ. ಇಂದು 3418 ಮಂದಿಗೆ ಹೊಸ ಸೋಂಕು ತಗುಲಿದೆ.ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1166647 ಕ್ಕೆ ಹೆಚ್ಚಳವಾಗಿದೆ. ನಗರದಲ್ಲಿ 5483 ಮಂದಿ ಚೇತರಿಸಿಕೊಂಡಿದ್ದು ಒಟ್ಟು ಬಿಡುಗಡೆಗೊಂಡವರ ಸಂಖ್ಯೆ 1009323 ಕ್ಕೆ ಏರಿಕೆಯಾಗಿದೆ . ಒಟ್ಟು ಸಕ್ರಿಯ ಪ್ರಕರಣಗಳು 143702 ಕ್ಕೆ ಹೆಚ್ಚಳವಾಗಿದೆ ಆರೋಗ್ಯ ಇಲಾಖೆ
ಎಂದು ಮಾಹಿತಿ ನೀಡಿದೆ.
ಜಿಲ್ಲೆಗಳ ವಿವರ ಹೀಗಿದೆ:
ಬಾಗಲಕೋಟೆ 217, ಬಳ್ಳಾರಿ 399, ಬೆಳಗಾವಿ 891, ಬೆಂಗಳೂರು ಗ್ರಾಮಾಂತರ 202, ಬೆಂಗಳೂರು ನಗರ 3,418, ಬೀದರ್ 22, ಚಾಮರಾಜನಗರ 80, ಚಿಕ್ಕಬಳ್ಳಾಪುರ 152, ಚಿಕ್ಕಮಗಳೂರು 504, ಚಿತ್ರದುರ್ಗ 637, ದಕ್ಷಿಣ ಕನ್ನಡ 536, ದಾವಣಗೆರೆ 178, ಧಾರವಾಡ 267, ಗದಗ 214, ಹಾಸನ 1,127, ಹಾವೇರಿ 219, ಕಲಬುರಗಿ 82, ಕೊಡಗು 162, ಕೋಲಾರ 338, ಕೊಪ್ಪಳ 272, ಮಂಡ್ಯ 337, ಮೈಸೂರು 1,153, ರಾಯಚೂರು 133, ರಾಮನಗರ 138, ಶಿವಮೊಗ್ಗ 520, ತುಮಕೂರು 769, ಉಡುಪಿ 735, ಉತ್ತರ ಕನ್ನಡ 332, ವಿಜಯಪುರ 163 ಮತ್ತು ಯಾದಗಿರಿಯಲ್ಲಿ 107 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.