476 ಮಂದಿ ಸೋಂಕಿಗೆ ಬಲಿ, 31459 ಗುಣಮುಖ, 24,414 ಜನರಿಗೆ ಸೋಂಕು

ಬೆಂಗಳೂರು, ಮೇ.27-ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು 31459 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ 2094369 ಮಂದಿ ಚೇತರಿಕೆ ಕಂಡಿದ್ದಾರೆ.
24,414 ಮಂದಿಗೆ ಹೊಸ ಸೋಂಕು ತಗುಲಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳು 402203 ಕ್ಕೆ ಏರಿಕೆಯಾಗಿದೆ.
ಆದರೆ ರಾಜ್ಯದಲ್ಲಿ ಸಾವಿನ‌ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಇಂದು ರಾಜ್ಯದಲ್ಲಿ 476 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸತ್ತವರ ಸಂಖ್ಯೆ 27405 ಕ್ಕೆ ಏರಿಕೆಯಾಗಿದೆ. ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 2523998 ಕ್ಕೆ ಹೆಚ್ಚಳ
ವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಇಂದು ನಗರದಲ್ಲಿ 273 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಒಟ್ಡು ಮೃತರ ಸಂಖ್ಯೆ 12421 ಕ್ಕೆ ಹೆಚ್ವಳವಾಗಿದೆ.
ಇಂದು 5949 ಮಂದಿಗೆ ಹೊಸ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1143878 ಕ್ಕೆ ಹೆಚ್ವಳವಾಗಿದೆ. ಇಂದು 6643 ಮಂದಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ 925066 ಮಂದಿ ಗುಣಮುಖರಾಗಿದ್ದಾರೆ. ನಗರದಲ್ಲಿ ಇಂದು ಸಕ್ರಿಯ ಪ್ರಕರಣಗಳು 206090ಕ್ಕೆ ಹೆಚ್ವಳವಾಗಿದೆ.
ಜಿಲ್ಲೆಗಳ ವಿವರ ಹೀಗಿದೆ:
ಬಾಗಲಕೋಟೆ 214, ಬಳ್ಳಾರಿ 725, ಬೆಳಗಾವಿ 1147, ಬೆಂಗಳೂರು ಗ್ರಾಮಾಂತರ 623, ಬೆಂಗಳೂರು ನಗರ 5949, ಬೀದರ್ 60, ಚಾಮರಾಜನಗರ 380, ಚಿಕ್ಕಬಳ್ಳಾಪುರ 238, ಚಿಕ್ಕಮಗಳೂರು 715, ಚಿತ್ರದುರ್ಗ 710, ದಕ್ಷಿಣಕನ್ನಡ 555, ದಾವಣಗೆರೆ 806, ಧಾರವಾಡ 678, ಗದಗ 370, ಹಾಸನ 1505, ಹಾವೇರಿ 159, ಕಲಬುರಗಿ 153, ಕೊಡಗು 337, ಕೋಲಾರ 591, ಕೊಪ್ಪಳ 495, ಮಂಡ್ಯ 755, ಮೈಸೂರು 2240, ರಾಯಚೂರು 445, ರಾಮನಗರ 263, ಶಿವಮೊಗ್ಗ 822, ತುಮಕೂರು 1219, ಉಡುಪಿ 905, ಉತ್ತರಕನ್ನಡ 659, ವಿಜಯಪುರ 305 ಮತ್ತು ಯಾದಗಿರಿ ಜಿಲ್ಲೆಯಲ್ಲಿ 190 ಪ್ರಕರಣಗಳು ದಾಖಲಾಗಿವೆ.