5ನೇ ದಿನಕ್ಕೆ ಸಾರಿಗೆ ಮುಷ್ಕರ

ಹುಬ್ಬಳ್ಳಿ ಏ 11 : ಆರನೇ ವೇತನ ಅನ್ವಯ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರ 5 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಯಾಣಿಕರ ಪರದಾಟ ಮುಂದುವರೆದಿದೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಾರಿಗೆ ಸಂಸ್ಥೆಯ ಕೆಲವೇ ಬಸ್‍ಗಳು ಸಂಚಾರ ಪ್ರಾರಂಭಿಸಿವೆ. ಉಳಿದಂತೆ ಪರ್ಯಾಯವಾಗಿ ಖಾಸಗಿ ಬಸ್‍ಗಳ ವ್ಯವಸ್ಥೆಯಿಂದ ಜನತೆನಿರಾಳವಾಗಿದ್ದು, ಗ್ರಾಮೀಣ ಪ್ರದೇಶಗಳ ಜನರ ಸಂಚಾರದ ಪರದಾಟ ಹೇಳತೀರದಾಗಿದೆ.
ಕೆಲ ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಪ್ರಾರಂಭವಾಗಿವೆ. ಆದರೆ ಹೆಚ್ಚಿನ ಗ್ರಾಮೀಣ ಪ್ರದೇಶಗಳಿಗೆ ಬಸ್‍ಗಳ ಸಂಚಾರ ಇನ್ನೂ ಪ್ರಾರಂಭವಾಗಿಲ್ಲ.
ಬಾಗಲಕೋಟ, ಹಾವೇರಿ, ಗದಗ, ವಿಜಯಪುರ, ಕಾರವಾರ, ಬೆಳಗಾವಿಗೆ ಖಾಸಗಿ ಬಸ್‍ಗಳು ಸಂಚರಿಸುತ್ತಿವೆ. ಜಿಲ್ಲಾ ಕೇಂದ್ರಗಳಿಂದ ಮುಖ್ಯ ಪ್ರದೇಶಗಳಲ್ಲಿ ಅಂದರೇ ಕೆಲ ತಾಲೂಕಾ ಪ್ರದೇಶಗಳಿಗೆ ಮಾತ್ರ ಬಸ್‍ಗಳು ಸಂಚರಿಸುತ್ತಿವೆ.
ಗ್ರಾಮೀಣ ಪ್ರದೇಶಗಳಿಂದಲೇ ಶಹರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಬರುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರು ತಮ್ಮ ಜೀವನ ಸಾಗಿಸುವುದು ತುಂಬಾ ಕಷ್ಟಕರವಾಗಿದೆ.
ಕೆಲ ಗ್ರಾಮೀಣ ಪ್ರದೇಶದಿಂದ ತಾಲೂಕು ಹಾಗೂ ನಗರಗಳಿಗೆ ಸಂಚರಿಸುವ ನೌಕರರಿಗೂ ತೊಂದರೆಯಾಗುತ್ತಿದೆ. ಟೆಂಪೆÇೀ, ಟಂಟಂ ವಾಹನಗಳ ಸೌಲಭ್ಯವಿದ್ದರೂ ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲು ಸಾಧ್ಯವಾಗದ ಹಿನ್ನೆಲೆ ಸಂಚಾರ ಪರದಾಟ ಇನ್ನೂ ಮುಂದುವರಿದಿದೆ.
ಬೇಡಿಕೆ ಈಡೇರಿಸುವವರೆಗೂ ಮುಷ್ಕರದಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಸಾರಿಗೆ ಸಂಸ್ಥೆ ನೌಕರರು ಪಟ್ಟು ಹಿಡಿದರೆ, ಇತ್ತ ಸರ್ಕಾರ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಹೇಳುತ್ತ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರ ಮೇಲೆ ಕ್ರಮಗಳನ್ನು ಜರುಗಿಸಲು ಮುಂದಾಗುತ್ತಿದೆ. ಇದರ ಮಧ್ಯೆ ಪ್ರಯಾಣಿಕರು ಮಾತ್ರ ಪರಿತಪಿಸುವಂತಾಗಿದೆ.