5 ಕೋಟಿ ಸ್ಕಾಲರ್‍ಶಿಪ್ ಪ್ರಕಟಿಸಿದ ಶಾಹೀನ್ ಸಂಸ್ಥೆ

ವಿಜಯಪುರ ನ 9: ನೀಟ್ ಸೇರಿದಂತೆ ಇತರೆ ಕೋರ್ಸ್ ಗಳಿಗೆ ಪ್ರವೇಶ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರೂ. ಸ್ಕಾಲರ್ ಶಿಪ್ ಅನ್ನು ಬೀದರ ಮೂಲದ ಶಾಹೀನ್ ಸಂಸ್ಥೆ ಪ್ರಕಟಿಸಿದೆ.
ಕೊರೋನಾ ಹಾಗೂ ಅತಿವೃಷ್ಟಿಯಿಂದಾಗಿ ಪೆÇೀಷಕರು ಆರ್ಥಿಕ ಸಂಕಷ್ಟದಲ್ಲಿದ್ದು ಅಂತಹವರಿಗೆ ಹೈದ್ರಾಬಾದ್ ಕರ್ನಾಟಕದ ಬೀದರ್‍ನ ಶಾಹೀನ್ ಶಿಕ್ಷಣ ಸಂಸ್ಥೆಯು ಪ್ರಸಕ್ತ ಸಾಲಿನ ನೀಟ್ ಹಾಗೂ ಇತರೆ ಕೋರ್ಸುಗಳ ಪ್ರವೇಶ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರು. ವಿದ್ಯಾರ್ಥಿ ವೇತನ ಪ್ರಕಟಿಸಿ ವಿದ್ಯಾರ್ಥಿಗಳ ಸಹಾಯಕ್ಕೆ ಮುಂದಾಗಿದೆ. ಈ ಸಲುವಾಗಿ ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಅವರು, ವಿದ್ಯಾರ್ಥಿ ವೇತನದಿಂದ ಮೂರು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುವ ನಿರೀಕ್ಷೆ ಇದೆ. ಕೊರೋನಾ ಕಾರಣದಿಂದ ಪೆÇೀಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಸಂಸ್ಥೆಯ ವೆಬ್‍ಸೈಟ್ ನಲ್ಲಿ ಉಚಿತವಾಗಿ ಹೆಸರು ನೋಂದಾಯಿ ಸಿಕೊಂಡು ವಿದ್ಯಾರ್ಥಿ ವೇತನ ಲಾಭ ಪಡೆದುಕೊಳ್ಳಬಹುದು. ನೀಟ್ ದೀರ್ಘ ಕಾಲದ ರಿಪೀಟರ್ಸ ತರಬೇತಿ ಪ್ರವೇಶಕ್ಕೆ ನ.15 ಕಡೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು ಎಂದು ಹೇಳಿದರು. ಸಂಸ್ಥೆ 32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾದ ಶಾಹೀನ್ ಶಿಕ್ಷಣ ಸಂಸ್ಥೆ ಇಂದು 17 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಮಟ್ಟಕ್ಕೆ ಬೆಳೆದಿದೆ. ಕರ್ನಾಟಕ ಸೇರಿ ದೇಶದ ವಿವಿಧೆಡೆ ಒಟ್ಟು 42 ಶಾಖೆಗಳನ್ನು ಹೊಂದಿರುವ ಸಂಸ್ಥೆಯು ಗುಣಮಟ್ಟದ ಶಿಕ್ಷಣದ ಮೂಲಕ ದ್ವಿತೀಯ ಪಿಯುಸಿ, ಸಿಇಟಿ, ನೀಟ್ ಫಲಿತಾಂಶದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ ಎಂದರು. ನಮ್ಮ ದೇಶದ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕ ಹಾಗೂ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ನೀಟ್ ದೀರ್ಘಕಾಲದ ರಿಪೀಟರ್ಸಗಳಿಗೆ ಅಂಕಗಳನ್ನು ಆಧರಿಸಿ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು. ಸಂಸ್ಥೆಯ ಬೀದರ್ ಶಾಖೆಗೆ ಮಾತ್ರ ಅನ್ವಯಿಸುವಂತೆ ಪಿಯುಸಿ ಕಲಾ, ವಾಣಿಜ್ಯ, ಬಿಎ, ಬಿಎಸ್ಸಿ, ಬಿಕಾಂ ಹಾಗೂ ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೂ ಈ ವಿದ್ಯಾರ್ಥಿ ವೇತನ ಅನ್ವಯಿಸುತ್ತದೆ ಎಂದು ವಿವರಿಸಿದರು. ಈ ಬಾರಿ ನೀಟ್ ಪರೀಕ್ಷೆಯಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾದ ಕಾರ್ತಿಕ್ ರೆಡ್ಡಿ 720ಕ್ಕೆ 710 ಅಂಕ ಗಳಿಸಿ ದೇಶಕ್ಕೆ 9ನೇ ರ್ಯಾಂಕ್ ಮತ್ತು ಕರ್ನಾಟಕಕ್ಕೆ ಮೊದಲ ರ್ಯಾಂಕ್ ತಂದುಕೊಡುವ ಮೂಲಕ ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದರು. ಸಂಸ್ಥೆಯ ಇನ್ನೂ ಹಲವು ವಿದ್ಯಾರ್ಥಿಗಳು ನೀಟ್‍ನಲ್ಲಿ ಉತ್ತಮ ಸಾಧನೆ ಮಾಡಿದ್ದರು ಎಂದು ತಿಳಿಸಿದರು. ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಸ್ಕಾಲರ್ ಶಿಪ್ ನ ಪ್ರಯೋಜನ ಪಡೆಯಲು ವಿನಂತಿಸಿದರು. ಸುದ್ದಿಗೋಷ್ಠಿಯಲ್ಲಿ ವಿಜಯಪುರ ಶಾಹೀನ್ ಕಾಲೇಜಿನ ಸಂಚಾಲಕ ಶಾನೂರ ಬಾಬಾ ಹಾಗೂ ನೀಟ್ ನಲ್ಲಿ 8 ನೇ ರ್ಯಾಂಕ್ ಗಳಿಸಿದ ಅರ್ಬಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.